ಮೂಡುಬಿದಿರೆ: ಕಾರು, ಬೈಕ್ ನಡುವೆ ಅಪಘಾತ: ಪಿಯುಸಿ ವಿದ್ಯಾರ್ಥಿ ಸಾವು
ಮೂಡುಬಿದಿರೆ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ– ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಎಂದು ಗುರುತಿಸಲಾಗಿದೆ.
ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎನ್ನಲಾಗಿದೆ.




