February 15, 2026

ಬೆಳ್ತಂಗಡಿ: 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image992620998-1771063164737.jpg

ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನಂಜುಂಡ ಮಾಗಡಿ(39) ಬಂಧಿತ ಆರೋಪಿ.

2017ರಲ್ಲಿ ರೆಖ್ಯ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಸಂಬಂಧ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13 ರಂದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!