April 6, 2026

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎ.ಬಿ. ಅಬ್ದುಲ್ಲಾ ಕೊಳ್ನಾಡು ನೇಮಕ

0
image_editor_output_image-1798936072-1771315837816.jpg

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ (ಗ್ರಾಮಾಂತರ) ವತಿಯಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕೋಳ್ನಾಡು ಗ್ರಾಮದ ಕಾಂಗ್ರೆಸ್ ಮುಖಂಡರಾದ ಶ್ರೀ ಎ.ಬಿ. ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಮಂತ್ರಿಗಳಾದ ಶ್ರೀ ಬಿ. ರಮನಾಥ್ ರೈ ಅವರ ಶಿಫಾರಸಿನ ಮೇರೆಗೆ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆಯವರ ಆದೇಶದಂತೆ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಎಚ್. ಮಹಮ್ಮದ್ ಆಲಿ ಅವರು ಈ ನೇಮಕಾತಿ ಆದೇಶವನ್ನು ನೀಡಿದ್ದಾರೆ.

ವ್ಯಕ್ತಿ ಪರಿಚಯ: ಪ್ರಸ್ತುತ ಸೇವೆ: ಎ.ಬಿ. ಅಬ್ದುಲ್ಲಾ ಅವರು ಪ್ರಸ್ತುತ ಬಂಟ್ವಾಳ ತಾಲೂಕು ಕೆಡಿಪಿ (KDP) ಸದಸ್ಯರಾಗಿ ಹಾಗೂ ಕೋಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅನುಭವ: ಇವರು ವಿಟ್ಲ ಪಟ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಾಜಿ ನಿರ್ದೇಶಕರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ ದೀರ್ಘ ಅನುಭವ ಹೊಂದಿದ್ದಾರೆ. ಪಕ್ಷದ ಸಂಘಟನೆ ಮತ್ತು ಪ್ರಚಾರ ಕಾರ್ಯಗಳಲ್ಲಿ ಇವರ ಸಕ್ರಿಯ ಸೇವೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!