February 18, 2026

ದವಡೆ ಹಲ್ಲಿನ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ

0
image_editor_output_image1985631192-1771393744770.jpg

ಕಲಬುರಗಿ: ದವಡೆ ಹಲ್ಲಿನ ಸಮಸ್ಯೆ ಅಂತಾ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ ವೈದ್ಯರು ನೀಡಿದ ಅನಸ್ತೇಶಿಯಾ ಇಂಜೆಕ್ಷನ್‌ನಿಂದ ಕೋಮಾಗೆ ಹೋಗಿದ್ದು, ಒಂದೂವರೆ ತಿಂಗಳಿನಿಂದ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ನಾಜಿಯಾ ಎರಡು ಮಕ್ಕಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಈ ನಡುವೆ ಜನವರಿ 1ರಂದು ಹಲ್ಲು ನೋವು ಅಂತ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬಂದವರು ಕೋಮಾಗೆ ಹೋಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!