February 19, 2026

ಬೈಕ್, ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತ್ಯು

0
image_editor_output_image1783858048-1771458968207.jpg

ರಾಯಬಾಗ: ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಜೈಸಿಂಗ್‌ಪುರ ಮೂಲದ ಗಿರೇಪ್ಪ ಕುಂದ್ರಾಳಿ (38), ಇವರ ಪತ್ನಿ ಮಂಜುಳಾ (28) ಮತ್ತು 7 ವರ್ಷದ ಪುತ್ರಿ ಆರಾಧ್ಯ ಎಂದು ಗುರುತಿಸಲಾಗಿದೆ.

ಕರ್ನಾಟಕ-ಮಹಾರಾಷ್ಟ್ರ ರಾಜ್ಯ ಹೆದ್ದಾರಿಯ ಕುಡಚಿ ಮತ್ತು ಹಾರೂಗೇರಿ ಕ್ರಾಸ್ ಮಧ್ಯೆ ಇರುವ ಅಲಖನೂರ ಗ್ರಾಮದ ಶ್ರೀ ಕರಿಸಿದ್ದೇಶ್ವರ ಮಹಾದ್ವಾರದ ಸಮೀಪವಿರುವ ಅಪಾಯಕಾರಿ ತಿರುವಿನಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!