November 22, 2024

ಕಾರವಾರ: ಶಾಲಾ ಮಕ್ಕಳ ಮೇಲೆ ಜೇನು ನೊಣ ದಾಳಿ:
20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

0

ಕಾರವಾರ: ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡದ ಕಾರವಾರದಲ್ಲಿ ನಡೆದಿದೆ.

ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಏಕಾಏಕಿ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನಮರದಲ್ಲಿ ಗೂಡುಕಟ್ಟಿದ್ದ ಜೇನುನೊಣ ದಾಳಿ ಮಾಡಿದೆ.

ಈ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ಕಡಿದಿದೆ. ತಕ್ಷಣಕ್ಕೆ 16 ಜನರು ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಜೇನು ಕಚ್ಚಿದ್ದು, ಗಂಭೀರ ಗಾಯಗೊಂಡ ಇವರನ್ನೂ ಸಹ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿಗತಿ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳ ಮೇಲೆ ಜೇನು ಕಚ್ಚಿ ಹೆಚ್ಚಿನ ಹಾನಿ ಮಾಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆಗೂ ಸಹ ಸೂಚನೆ ನೀಡಲಾಗಿದ್ದು, ಶಾಲಾ ಆವರಣದಲ್ಲಿ ಇರುವ ಜೇನನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!