ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.
ಪುನೀತ್ (27) ಮೃತ ಯುವಕ. ಪುನೀತ್ ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಬುಧವಾರ ಎಂದಿನಂತೆಯೇ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದ.
ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶವಾಗಾರದ ಬಳಿ ನೂರಾರು ಮಂದಿ ಜಮಾಯಿಸಿದ್ದಾರೆ.




