February 20, 2026

ಬಂಟ್ವಾಳ: ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಸಾವು

0
image_editor_output_image-1817574555-1771545353131.jpg

ಬಂಟ್ವಾಳ: ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಬಿಜೆಪಿಯ ಕಾರ್ಯಕರ್ತ ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನಸಂಘದ ಹಿರಿಯ ಕಾರ್ಯಕರ್ತ ತೆಂಕಕಜೆಕಾರು, ಬಡಗಕಜೆಕಾರು ಹಾಗೂ ಸರಪಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿಯ ಆಧಾರಸ್ತಂಭವಾಗಿ ಜನಸಾಮಾನ್ಯರ ನೋವು ನಲಿವುಗಳಿಗೆ ಸದಾ ಸ್ಪಂದಿಸಿ, ಜನಪರವಾದ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡು ಜನನಾಯಕರೆನಿಸಿಕೊಂಡಿದ್ದರು.

ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಪ್ರತಿನಿಧಿಯಾಗಿ, ಸಹಕಾರಿ ಕ್ಷೇತ್ರದಲ್ಲಿಯೂ ಸೈ ಎನಿಸಿಕೊಂಡಿದ್ದ ಹರಿಶ್ಚಂದ್ರ ಪೂಜಾರಿ ಕಜೆಕಾರುರವರು ದೀರ್ಘಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!