February 20, 2026

ಪ್ರವಾಸಕ್ಕೆ ತೆರಳಲು ಅನುಮತಿ ನಿರಾಕರಿಸಿದ ಪತಿ: ಮನನೊಂದು ಪತ್ನಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-1610633039-1771575232904.jpg

ಮೈಸೂರು: ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.

ನಗರದ ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜೊತೆ ವಾಸವಿದ್ದರು.

Leave a Reply

Your email address will not be published. Required fields are marked *

error: Content is protected !!