ಹಿಟ್ & ರನ್‌ಗೆ 6 ವರ್ಷದ ಬಾಲಕಿ ಬಲಿ
ನವದೆಹಲಿ: ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ಹಿಟ್ & ರನ್‌ಗೆ 6 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ನಡೆದಿದೆ.
ಬಾಲಕಿ ತನ್ನ ಅಜ್ಜಿಯೊಂದಿಗೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಳು. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದು, ಮಗು ತೀವ್ರವಾಗಿ ಗಾಯಗೊಂಡಿದೆ.
ಆಕೆಯ ಅಜ್ಜಿ ಸಹಾಯಕ್ಕಾಗಿ ಹತಾಶವಾಗಿ ಬೇಡಿಕೊಂಡರೂ, ಯಾರೂ ತಕ್ಷಣ ಮುಂದೆ ಬರಲಿಲ್ಲ. ನಂತರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.




