November 13, 2026

ಬ್ರಹ್ಮಾವರ: ಗೂಡ್ಸ್ ವಾಹನ ಢಿಕ್ಕಿ: ಸ್ಕೂಟರ್ ಸವಾರ ಸಾವು

0
image_editor_output_image1608740207-1771629623469.jpg

ಬ್ರಹ್ಮಾವರ: ಸ್ಕೂಟರ್ ಗೆ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ ಘಟನೆ ಆರೂರು ಕ್ರಾಸ್ (ಕುಂಜಾಲು) ಎಂಬಲ್ಲಿ ನಡೆದಿದೆ.

ಮೃತರನ್ನು ಆರೂರಿನ ಶೇಖರ್ ಟಿ.ಕುಲಾಲ್ ಎಂದು ಗುರುತಿಸಲಾಗಿದೆ. ಆರೂರು ಮುಖ್ಯ ರಸ್ತೆಯನ್ನು ದಾಟಿ ಡಿವೈಡರ್ ಪಾಸ್ ಮಾಡುತ್ತಿದ್ದ ಸ್ಕೂಟರ್‌ಗೆ ಪೇತ್ರಿ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಶೇಖರ್ ಕುಲಾಲ್ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!