ಶಿವಮೊಗ್ಗ: ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ ನೇಣಿಗೆ ಶರಣು
ಶಿವಮೊಗ್ಗ: ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ ನೇಣಿಗೆ ಶರಣಾದ ಘಟನೆ ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು.
ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ.




