ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ
ಉಪ್ಪಿನಂಗಡಿ: ಉಪ್ಪಿನಂಗಡಿ 34 ನೆಕ್ಕಿಲಾಡಿಯ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.
ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಶವ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.




