February 21, 2026

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನ

0
image_editor_output_image1313654857-1771667161181.jpg

ಬಂಟ್ವಾಳ: ರಸ್ತೆ ಬದಿಯ ನಿರ್ಜನ ಪ್ರದೇಶದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 180 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ಗುರುತಿಸಲಾಗಿದೆ.

ಆರೋಪಿ ದಿನಾಂಕ 19-02-2026 ರಂದು ಮಧ್ಯಾಹ್ನ ಸಮಯ, ಬಂಟ್ವಾಳ ತಾಲೂಕು ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಎಂಬಲ್ಲಿ ರಸ್ತೆಯ ಬದಿಯ ನಿರ್ಜನ ಜಾಗದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ, ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಯಿಂದ 180 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!