ಬೆಳ್ತಂಗಡಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಸಮೀಪ ಸಂಭವಿಸಿದೆ.
ಗಾಯಾಳುವನ್ನು ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ ನಿವಾಸಿ ಸಂಜೀವ (50) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ವೇಳೆ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.




