February 23, 2026

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ 4 ಕೋಟಿ ರೂ. ಮೌಲ್ಯದ ಫೆರಾರಿ ಕಾರು: ಮೂವರಿಗೆ ಗಾಯ

0
image_editor_output_image-699521422-1771802525964.jpg

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ 4 ಕೋಟಿ ಮೌಲ್ಯದ ಫೆರಾರಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಭಾನುವಾರ ಸಂಭವಿಸಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಜನಪ್ರಿಯ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅವರ ನಿವಾಸದ ಬಳಿಯ ರಸ್ತೆ ಸಂಖ್ಯೆ 45 ರ ಸಮೀಪ ಈ ಘಟನೆ ನಡೆದಿದೆ. ಸುಮಾರು 3.5-4 ಕೋಟಿ ರೂ. ಮೌಲ್ಯದ ಫೆರಾರಿ ಕಾರು ನಿಯಂತ್ರಣ ತಪ್ಪಿ ವಿಭಜಕದ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆರಾರಿ ಕಾರು ಡಿಕ್ಕಿ ಹೊಡೆದ ಕಾರಿನ ಹಿಂದೆ ಬರುತ್ತಿದ್ದ ಕೆಲವು ಕಾರುಗಳು ಮತ್ತು ಇತರ ವಾಹನಗಳು ಸಹ ಡಿಕ್ಕಿಯಲ್ಲಿ ಹಾನಿಗೊಳಗಾಗಿವೆ.

Leave a Reply

Your email address will not be published. Required fields are marked *

error: Content is protected !!