February 23, 2026

ಬುಲೆಟ್ ಬೈಕ್ ಚಲಾಯಿಸುವಾಗ ರಸ್ತೆಗೆ ಬಿದ್ದು ಯುವತಿ ಸಾವು

0
image_editor_output_image1569091654-1771840351906.jpg

ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಬಿದ್ದ, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯಿರ್ ಓದುತ್ತಿದ್ದಳು, ಸ್ವಾತಿಗೆ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು ಎಂದು ತಿಳಿದುಬಂದಿದೆ.

ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್‌ನಲ್ಲಿ ಜಾಲಿ ರೈಡ್‌ಗೆ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, ಇನ್ನೋರ್ವಳ ಸ್ಥಿತಿ ಗಂಭೀರವಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Leave a Reply

Your email address will not be published. Required fields are marked *

You may have missed

error: Content is protected !!