February 25, 2026

ಬೆಳ್ತಂಗಡಿ: ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

0
image_editor_output_image2004150656-1771889006320.jpg

ಬೆಳ್ತಂಗಡಿ: ಗರ್ಭಿಣಿಯೊಬ್ಬರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು.

ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಅದರಂತೆ ಲೀಲಾವತಿಯನ್ನು ಇಬ್ಬರು ಶುಶ್ರೂಶಕಿಯರ ಜೊತೆಗೆ ಆಸ್ಪತ್ರೆಯ ತುರ್ತು ವಾಹನದಲ್ಲಿ ಮಂಗಳೂರಿಗೆ ಕಳುಹಿಸಿದ್ದರು.

ಆಂಬುಲೆನ್ಸ್ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಲೀಲಾವತಿಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದಾ ಹಾಗೂ ಸಿಸ್ಟರ್ ಸೌಮ್ಯಾ ಎಸ್. ಆಂಬುಲೆನ್ಸ್ ವಾಹನದಲ್ಲೇ ಲೀಲಾವತಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಆಂಬುಲೆನ್ಸ್ ಚಾಲಕ ದಿನೇಶ್ ಗೌಡರ ಸಮಯಪ್ರಜ್ಞೆಯಿಂದ ಅತ್ಯಂತ ಕಡಿಮೆ ಸಮಯದಿಂದ ಲೇಡಿಗೋಶನ್ ಆಸ್ಪತ್ರೆಗೆ ತಲುಪಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!