February 25, 2026

ಉಡುಪಿ: ನಕಲಿ ಹುಲಿ ಉಗುರು ಮಾರಾಟ: ಸನ್ಯಾಸಿಯ ಬಂಧನ

0
image_editor_output_image2000456572-1771889460285.jpg

ಉಡುಪಿ: ನಕಲಿ ಹುಲಿ ಉಗುರು ಅಸಲಿ ಎಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಸನ್ಯಾಸಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.

ಸನ್ಯಾಸಿ ವೇಷದಲ್ಲಿದ್ದ ವಂಚಕ ಹುಲಿ ಉಗುರು ಅಸಲಿ ಎಂದು ನಂಬಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ನಾಗರಿಕ ಸಮಿತಿಯ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಗರ ಠಾಣೆಯ ಪೊಲೀಸರು ಆರೋಪಿಯನ್ನು ನಗರದ ಹಳೆ ಬಸ್ಸು ನಿಲ್ದಾಣದ ಬಳಿ ವಶಕ್ಕೆ ಪಡೆದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಕಾರ್ಯಚರಣೆಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!