February 24, 2026

ಸುಳ್ಯ: ಚಲಿಸುತ್ತಿರುವ ಕಾರಿನ ಮೇಲೆ ಬಿದ್ದ ಮರ: ಕಾರು ಸಂಪೂರ್ಣ ಜಖಂ, ಕಾರಿನಲ್ಲಿದ್ದವರು ಪಾರು

0
image_editor_output_image1301454537-1771926635994.jpg

ಸುಳ್ಯ: ಚಲಿಸುತ್ತಿರುವ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂಗೊಂಡ ಹಾಗೂ ಕಾರಿನಲ್ಲಿದ್ದವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಸುಳ್ಯ ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಸಂಭವಿಸಿದೆ.

ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪಂಜಾ ಕಡೆಗೆ ಪ್ರಯಾಣಿಸುತ್ತಿದ್ದರು. ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುತ್ತಿದ್ದಾಗ, ಬೆಂಗಮಲೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರು ನಜ್ಜುಗುಜ್ಜಾಗಿತ್ತು.

Leave a Reply

Your email address will not be published. Required fields are marked *

error: Content is protected !!