ದ್ವೇಷ ಭಾಷಣ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ FIR ದಾಖಲು
ಯಾದಗಿರಿ: ಗುರುಮಠಕಲ್ ಪಟ್ಟಣದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಕಾರ್ಯಕ್ರಮದಲ್ಲಿ ನೀಡಿದ ಭಾಷಣದ ಕುರಿತು ದ್ವೇಷ ಭಾಷಣ ಆರೋಪ ಕೇಳಿಬಂದ ಹಿನ್ನೆಲೆದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಫೆಬ್ರವರಿ 21ರಂದು ಗುರುಮಠಕಲ್ ಪಟ್ಟಣದಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯತ್ನಾಳ ಅವರು ತಮ್ಮ ಭಾಷಣದಲ್ಲಿ ಕೆಲವು ಸಮುದಾಯಗಳನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳು ಮಾಡಲಾಗಿದೆ ಎಂಬ ಆರೋಪಗಳು ಚರ್ಚೆಗೆ ಕಾರಣವಾಗಿವೆ.
ಈ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್-2023ರ ಕಲಂ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




