April 24, 2026

ಮಂಗಳೂರು: ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಓಡಾಟ

0
image_editor_output_image-270097158-1772010482933.jpg

ಮಂಗಳೂರು: ಮಂಗಳೂರು ನಗರದಲ್ಲೇ ಇದೀಗ ಚಿರತೆ ಓಡಾಟ ಆರಂಭಸಿದೆ. ರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫೆಬ್ರವರಿ 23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಭಾಗದಲ್ಲಿ ಸ್ವಲ್ಪ ಕಾಡು ಹೊಂದಿದ್ದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ, ದೊಡ್ಡ ಅಪಾರ್ಟ್ಮೆಂಟ್ ಗಳು, ವಿಲ್ಲಾ ರೀತಿಯ ಮನೆಗಳು ಮಾತ್ರ ಇರುವುದರಿಂದ ಚಿರತೆಗೆ ಇಲ್ಲಿ ತಿನ್ನುವುದಕ್ಕೂ ಏನೂ ಸಿಗಲಿಕ್ಕಿಲ್ಲ. ಇಂಥ ಜಾಗದಲ್ಲಿ ಚಿರತೆ ಕಾಣಿಸಿದ್ದು ಸ್ಥಳೀಯರನ್ನು ಅಚ್ಚರಿಗೊಳಿಸಿದೆ.‌

Leave a Reply

Your email address will not be published. Required fields are marked *

error: Content is protected !!