September 21, 2026

ಬಾಲಕಿಯ ಜೊತೆ ಅನುಚಿತ ವರ್ತನೆ: ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು

0
image_editor_output_image1047924836-1772062515575.jpg

ಬೆಂಗಳೂರು: ಅಪ್ರಾಪ್ತೆಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿದೆ. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿ, ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ಯಾದಗಿರಿ ಎಸ್‌ಪಿಗೆ ಕ್ರಮ ತೆಗೆದುಕೊಳ್ಳಲು ಪತ್ರ ಬರೆಯಲಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *

error: Content is protected !!