April 24, 2026

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ ನೀರಿನಲ್ಲಿ ಮುಳುಗಿ ಮಹಿಳೆ ಸಾವು

0
image_editor_output_image277158481-1772062821787.jpg

ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.

ಕುಂದಲಗುರ್ಕಿ ಗ್ರಾಮದ ರೇಖಾ (37) ಮೃತ ಮಹಿಳೆ. ರೇಖಾ ಎನ್‌ಜಿಓ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ರೆಸಾರ್ಟ್ ಕಂ ಹೋಟೆಲ್‌ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದರೆ ದುರಾದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!