April 24, 2026

ಯುವಕನ ಬರ್ಬರವಾಗಿ ಹತ್ಯೆ: ಸಾಕ್ಷ್ಯನಾಶಪಡಿಸಲು ಶವವನ್ನು ಹೆದ್ದಾರಿಯಲ್ಲಿ ಎಸೆದ ದುಷ್ಕರ್ಮಿಗಳು

0
image_editor_output_image1764227320-1772063171359.jpg

ಹುಬ್ಬಳ್ಳಿ: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದು, ಸಾಕ್ಷ್ಯನಾಶಪಡಿಸುವ ಉದ್ದೇಶದಿಂದ ಶವವನ್ನು ಹೆದ್ದಾರಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹತ್ಯೆಗೊಳಗಾದ ಯುವಕನನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ (29) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಯುವಕನನ್ನು ಬೇರೆಡೆ ಹತ್ಯೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸಲು ಶವವನ್ನು ಹೆದ್ದಾರಿಯ ಬದಿಯಲ್ಲಿ ಎಸೆದು ಪರಾರಿಯಾಗಿದ್ದಾರೆ.

ಆರೋಪಿಗಳು ಕೊಲೆಯನ್ನು ಅಪಘಾತದಂತೆ ಬಿಂಬಿಸಲು ಅಥವಾ ಶವವನ್ನು ಗುರುತಿಸಲಾಗದಂತೆ ಮಾಡಲು ಹೆದ್ದಾರಿಯ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!