ವಿಟ್ಲ: ಅಕ್ರಮವಾಗಿ ಗೋ ಸಾಗಾಟ ಪತ್ತೆ ಹಚ್ಚಿದ ವಿಟ್ಲ ಪೊಲೀಸರು: ವಾಹನ ಮತ್ತು ಜಾನುವಾರು ವಶಕ್ಕೆ
ವಿಟ್ಲ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೊರ್ವ ಚೇತನ್ ಎಂಬವರನ್ನು ವಿಚಾರಿಸಿದ್ದಾರೆ.
ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡೂ ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಎಲ್ಲಿಂದಲೋ ಸಾಗಾಟ ಮಾಡಿಕೊಂಡು ಬಂದಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೊರ್ವ ಚೇತನ್ ಎಂಬವರಲ್ಲಿ ವಿಚಾರಿಸಲಾಗಿ, ಚನ್ನರಾಯಪಟ್ಟಣದಿಂದ ಶಂಕರ ಎಂಬವರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಲೆತ್ತೂರಿನ ಶಾಫಿ ಎಂಬವರಿಗೆ, ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ತುಂಬಿಸಿ ಕಳುಹಿಸಿದ್ದು, ಜಾನುವಾರುಗಳನ್ನು ಸಾಗಿಸಲು ಬೇರೆಯವರ ಹೆಸರಿನಲ್ಲಿ ದಾಖಲಾತಿಯನ್ನು ಪಡೆದು ಸಾಗಿಸುತ್ತಿರುವುದು ತಿಳಿದುಬಂದಿದ್ದು, ವಶಕ್ಕೆ ಪಡೆಯಲಾಗಿದೆ.




