March 1, 2026

ಪರೀಕ್ಷೆ ದಿನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

0
image_editor_output_image-1567980058-1772323327639.jpg

ಚಿಕ್ಕೋಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಪರೀಕ್ಷೆ ದಿನವೇ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತರನ್ನು ಬಂಬಲವಾಡ ಗ್ರಾಮದ ಭೂಮಿಕಾ ಮಾಳಂಗಿ (17) ಮೃತಪಟ್ಟ ವಿದ್ಯಾರ್ಥಿನಿ. ಆಕೆ ಚಿಕ್ಕೋಡಿ ಪಟ್ಟಣದ ಚಿಂಚಣಿಯ ಪದವಿ ಪೂರ್ವ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಶನಿವಾರದಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಈ ದುರ್ಘಟನೆ ಸಂಭವಿಸಿದೆ. ಪರೀಕ್ಷೆ ಬರೆಯಲು ಬೆಳಿಗ್ಗೆ ಬೇಗ ಎದ್ದು ಅಧ್ಯಯನ ಮಾಡಿಕೊಂಡು, ಸ್ನಾನ ಮುಗಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಆಕೆಗೆ ಏಕಾಏಕಿ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ.

ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!