ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯಾಗಿದೆ: ಡೊನಾಲ್ಡ್ ಟ್ರಂಪ್
ಟೆಹ್ರಾನ್: ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯಾಗಿದೆ ಎಂಬುದಾಗಿ ರಾಯಿಟರ್ಸ್ ಸುದ್ದಿ ಸಂಸ್ಥೆ ಹಾಗೂ ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಅದಲ್ಲದೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಖಾಮಿನೈ ಅವರ ಹತ್ಯೆಯಾಗಿದೆ ಎಂಬ ಇಸ್ರೇಲಿ ವರದಿಗಳ ಕುರಿತು ಇರಾನ್ ಸರ್ಕಾರದಿಂದ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಅಲ್ಲಿನ ಮಾಧ್ಯಮಗಳು ಈ ವರದಿಯನ್ನು ನಿರಾಕರಿಸಿವೆ.
ಇಸ್ರೇಲಿ ಮಾಧ್ಯಮಗಳ ವರದಿ ಪ್ರಕಾರ, ಪ್ರಸ್ತುತ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಮೃತದೇಹವೆಂದು ಹೇಳಲಾಗುತ್ತಿರುವ ಫೋಟೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತಿಳಿಸಲಾಗಿದೆ ಎಂದು ಕೆಲವು ಟಿವಿ ಮಾಧ್ಯಮಗಳು ತಿಳಿಸಿವೆ ಎಂದು ವರದಿಯಾಗಿದೆ.
ಆದರೆ, ಈ ಹೇಳಿಕೆಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಾಗಿಲ್ಲ. ಇರಾನ್ ಸರ್ಕಾರವು ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು ಖಾಮಿನೈ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದೆ.
ಇರಾನ್‌ನ ಅಧ್ಯಕ್ಷ ಹಾಗೂ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.




