ಮ್ಯಾರಥಾನ್‌ನಲ್ಲಿ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು
ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ನಾಸೀರ್ ಹುಸೇನ್ (58) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮಾದಕ ವಸ್ತು ವಿರುದ್ಧ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ನಗರದ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮ್ಯಾರಥಾನ್ ಓಡುತ್ತಿದ್ದಾಗ ನಾಸೀರ್ ಹುಸೇನ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ನಾಸಿರ್ ಹುಸೇನ್ ಅವರು ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿದಂತೆ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸಿದ್ದರು.




