March 2, 2026

ಖಮೇನಿ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಭಾರೀ ಪ್ರತಿಭಟನೆ: ಕರಾಚಿಯಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಗೆ ದಾಳಿ

0
image_editor_output_image1053900127-1772407188600.jpg

ಇಸ್ಲಾಮಾಬಾದ್: ಖಮೇನಿ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ. ವಿವಿಧ ನಗರಗಳಲ್ಲಿ ನಡೆದ ಪ್ರತಿಭಟನೆಗಳು ಕೆಲವೆಡೆ ಹಿಂಸಾತ್ಮಕ ತಿರುವು ಪಡೆದಿದ್ದು, ಪ್ರತಿಭಟನಾಕಾರರು ಕರಾಚಿಯಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯ ಮೇಲೆ ದಾಳಿ ನಡೆಸಿ ಆಸ್ತಿ ಹಾನಿ ಮಾಡಿರುವುದಾಗಿ ವರದಿಯಾಗಿದೆ.

ಹಿಂಸಾಚಾರದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಘರ್ಷವನ್ನು ನಿಯಂತ್ರಿಸಲು ಭದ್ರತಾ ಪಡೆಗಳು teargas ಮತ್ತು ಲಾಠಿಚಾರ್ಜ್ ನಡೆಸಿದರೆಂಬ ಮಾಹಿತಿ ಲಭ್ಯವಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ, ಹಲವು ಪ್ರದೇಶಗಳಲ್ಲಿ ಉದ್ವಿಗ್ನತೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸರ್ಕಾರ ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!