ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆಯೊಡ್ಡಿ ಪೋಸ್ಟ್: ಕಿಡಿಗೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಯು.ಟಿ.ಖಾದರ್ ಸೂಚನೆ
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಗೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಉಳ್ಳಾದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮುಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ ಪೋಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.




