March 2, 2026

ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಮೇಲೆ ಇರಾನ್ ದಾಳಿ

0
image_editor_output_image-1195132493-1772454246304.jpg

ಟೆಲ್ ಅವೀವ್: ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆದಿದೆ.

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ಇರಾನ್ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ, ಹೈಫಾದಲ್ಲಿನ ಭದ್ರತಾ ಮತ್ತು ಮಿಲಿಟರಿ ಕೇಂದ್ರಗಳು ಹಾಗೂ ಪೂರ್ವ ಜೆರುಸಲೆಮ್ ಮೇಲೆ ದಾಳಿ ಮಾಡಲಾಗಿದೆ.

‘ಜಿಯೋನಿಸ್ಟ್‌ ಆಡಳಿತದ ಕ್ರಿಮಿನಲ್ ಪ್ರಧಾನಿಯ ಕಚೇರಿ ಮತ್ತು ಆಡಳಿತದ ವಾಯುಪಡೆಯ ಕಮಾಂಡರ್‌ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಲಾಗಿತ್ತು’ ಎಂದು ಇರಾನ್ ಹೇಳಿದೆ. ದಾಳಿಯಲ್ಲಿ ಖೈಬರ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!