April 19, 2026

ನಿಧಾನವಾಗಿ ಕಾರು ಓಡಿಸುವಂತೆ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ

0
image_editor_output_image-1670238331-1772525743634.jpg

ಹಾಸನ: ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ನಡುರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ KA-01-ಎಂಎಫ್-2883 ನಂಬರ್‌ನ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು.

ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!