March 4, 2026

ಉಡುಪಿ: ಹಿಂದುತ್ವ ಸಂಘಟನೆಯ ಮುಖಂಡನಿಗೆ ಚಾಕು ಇರಿದ ಯುವಕ

0
image_editor_output_image2081703961-1772580655379.jpg

ಉಡುಪಿ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದುತ್ವ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಗಳ ಪ್ರಕಾರ ಮಂಜು ಕೊಳ ಅವರು ಮಂಗಳವಾರ ಸಂಜೆ ಮಲ್ಪೆ ಬೀಚ್ ಬಳಿ ಪಲಿಮಾರು ಭಾಗ ಜೋಡಿಯೊಂದರ ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ಕರೆದಿದ್ದರು ಎನ್ನಲಾಗಿದೆ.

ಈ ವೇಳೆ ಪರಸ್ಪರ ಮಾತಿಗೆ ಮಾತು ಬೆಳೆದು ಯುವಕನೋರ್ವ ಮಂಜು ಕೊಳ ಅವರಿಗೆ ಚೂರಿ ಇರಿದಿದ್ದಾನೆ. ಹೊಟ್ಟೆಯ ಭಾಗಕ್ಕೆ ಇರಿದ ಪರಿಣಾಮ ಮಂಜು ಕೊಳ ಅವರು ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿರುವುದಾಗಿದೆ. ಘಟನೆಗೆ ಯಾವುದೇ ಕೋಮು ಹಿನ್ನೆಲೆ ಇಲ್ಲ. ಆದ್ದರಿಂದ ಯಾರೂ ಸಹ ವದಂತಿಗಳನ್ನು ಹರಡಬಾರದು. ಗಾಯಗೊಂಡ ಮಂಜು ಕೊಳ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!