ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಡೋನ್ ಇರಾನ್ ದಾಳಿ
ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಡೋನ್ ದಾಳಿ ನಡೆದಿದೆ. ರಾಯಭಾರಿ ಕಚೇರಿಯ ಸುತ್ತಮುತ್ತಲಿನ ಪ್ರದೇಶದಿಂದ ಹೊಗೆ ಏರುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಮಾರಕ ದಾಳಿಗಳ ನಂತರ ಇರಾನ್ ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರಿಸಿದೆ.




