March 5, 2026

ಉಡುಪಿ: ಸಂಘಪರಿವಾರ ಸಂಘಟನೆಯ ಮುಖಂಡನಿಗೆ ಚೂರಿ ಇರಿದ ಪ್ರಕರಣ: ಐವರು ಆರೋಪಿಗಳ ಬಂಧನ

0
image_editor_output_image2126746269-1772667736836.jpg

ಉಡುಪಿ: ಲವ್ ಕೇಸ್ ಗೆ ಸಂಬಂಧಿಸಿದಂತೆ ರಾಜಿ ಪಂಚಾಯಿತಿ ವೇಳೆ ಸಂಘಪರಿವಾರ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬುಧವಾರ ಅರೆಸ್ಟ್ ಮಾಡಿದ್ದಾರೆ,
ಬಂಧಿತರನ್ನು ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್‌, ಅಭಿಜಿತ್ ಹಾಗೂ ಇನೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಮಲ್ಪೆ ಯುವಕ ಮತ್ತು ಪಡುಬಿದ್ರಿ–ಪಲಿಮಾರು ಭಾಗದ ಯುವತಿಯ ಪ್ರೇಮ ಸಂಬಂಧದ ಕುರಿತು ಮಾತುಕತೆಗೆ ಇಬ್ಬರು ಕಡೆಯವರೂ ಸೇರಿದ್ದರು. ಈ ವೇಳೆ ಉದ್ವಿಗ್ನತೆ ಉಂಟಾಗಿ, ಯುವತಿಯ ಕಡೆಯವರಿಂದ ಮಂಜು ಕೊಳ ಮೇಲೆ ಚಾಕು ಇರಿತ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೊಟ್ಟೆ ಭಾಗಕ್ಕೆ ಇರಿದ ಪರಿಣಾಮ ಅಲ್ಲೇ ಕುಸಿದ ಮಂಜು ಕೊಳ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದೆ. ಘಟನೆಗೆ ಯಾವುದೇ ಕೋಮು ಹಿನ್ನೆಲೆ ಇಲ್ಲ. ಆದ್ದರಿಂದ ಯಾರೂ ಸಹ ವದಂತಿಗಳನ್ನು ಹರಡಬಾರದು. ಗಾಯಗೊಂಡ ಮಂಜು ಕೊಳ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!