March 6, 2026

ರಾಜ್ಯ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಏನೆಲ್ಲಾ ಘೋಷಣೆ ಗೊತ್ತೇ?

0
image_editor_output_image-2133179019-1772778958985.jpg

ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಘೋಷಣೆಗಳು ಈ ಕೆಳಗಿಂನಂತಿವೆ.

1. ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ₹900 ಕೋಟಿ ಅನುದಾನ.

2. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು.

3. ತೀವ್ರತರವಾದ ಅಪೌಷ್ಟಿಕತೆಯನ್ನು ಹೊಂದಿರುವ ಮಕ್ಕಳಿಗೆ ವೈದ್ಯಕೀಯ ಮತ್ತು ಪೌಷ್ಟಿಕಾಂಶದ ಚಿಕಿತ್ಸೆ ನೀಡಲು ಈಗಾಗಲೇ 86 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಃಶ್ಚತನ ಕೇಂದ್ರಗಳು (NRC) * ರ್ಯನಿರ್ವಹಿಸುತ್ತಿದೆ.

4. ಟೈಪ್-1 ಮಧುಮೇಹದಿಂದ ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್‌ ಪೆನ್‌ಗಳನ್ನು ನೀಡಲಾಗುವುದು.

5. ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು.

6. ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುವುದು.

7. ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳೊಂದಿಗೆ ಬದುಕುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆಯನ್ನು Pallium India ಸಂಸ್ಥೆಯ ಸಹಯೋಗದೊಂದಿಗೆ ನೀಡಲಾಗುವುದು.

8. ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್‌ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ ₹20 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.

9. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲಾಗುವುದು.

.0. ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು.

1. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್‌ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!