March 6, 2026

ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ: ಮಲೆನಾಡು, ಕರಾವಳಿಯಲ್ಲಿ ಕಾಲು ಸಂಕ ನಿರ್ಮಾಣ: 56,432 ಉದ್ಯೋಗ ಭರ್ತಿ: ಸಿದ್ದರಾಮಯ್ಯ

0
image_editor_output_image985773885-1772779444345.jpg

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

ದಾಖಲೆಯ 17ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಲೆನಾಡು, ಕರಾವಳಿಯಲ್ಲಿ ಕಾಲು ಸಂಕ ನಿರ್ಮಾಣ

ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!