June 14, 2026

ಯೂಟ್ಯೂಬರ್ ನ್ಯಾನ್ಸಿ ಗ್ರೆವಾಲ್ ಹತ್ಯೆ

0
image_editor_output_image-878713246-1772839848183.jpg

ಒಟ್ಟಾವಾ: ಭಾರತದ ಪರವಾಗಿ ತೀಕ್ಷ್ಣ ಹೇಳಿಕೆಗಳು ಹಾಗೂ ಗಂಭೀರವಾದ ವಿಚಾರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದ ಯೂಟ್ಯೂಬರ್ ನ್ಯಾನ್ಸಿ ಗ್ರೆವಾಲ್(45) ಅವರನ್ನು ಕೆನಡಾದ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ.

ಮಾ. 3ರ ರಾತ್ರಿ ನ್ಯಾನ್ಸಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಹರಿತವಾದ ಆಯುಧಗಳಿಂದ ಅವರನ್ನು ಇರಿಯಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ವೇಳೆ ಅವರು ಮೃತಪಟ್ಟಿದ್ದಾರೆಂದು ಕೆನಡಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನ್ಯಾನ್ಸಿ ಗ್ರೆವಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ತೀಕ್ಷ್ಣ ಹೇಳಿಕೆ, ಪೋಸ್ಟ್ಗಳಿಂದ ಹೆಸರುವಾಸಿಯಾಗಿದ್ದರು. ಈವರೆಗೂ ಯಾವುದೇ ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆಯೇ? ಇಲ್ಲವೇ ಎಂಬ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.

ಘಟನೆಯ ವೇಳೆ ಮನೆಯ ಸುತ್ತಮುತ್ತ ಇದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ದಾಳಿಕೋರನ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಸ್ಥಳೀಯರ ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ದಾಳಿಯ ಹಿಂದೆ ಉಗ್ರಗಾಮಿಗಳ ಕೈವಾಡ ಇರಬಹುದೆಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ನ್ಯಾನ್ಸಿ ಗ್ರೆವಾಲ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನಿ ಚಟುವಟಿಕೆಗಳನ್ನು ಹೆಚ್ಚಾಗಿ ಟೀಕಿಸುತ್ತಿದ್ದರು. ಹೀಗಾಗಿ ಕೆಲವರು ಅವರನ್ನು ವಿರೋಧಿಸುತ್ತಿದ್ದರು ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!