June 13, 2026

ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸದ ರಾಜ್ಯ ಬಜೆಟ್‌: ಪ್ರವಾಸಿ ಕೂಟ ವಿಟ್ಲ ಬೇಸರ

0
image_editor_output_image1368666295-1772841731744.jpg

ವಿಟ್ಲ: ಕರ್ನಾಟಕ ರಾಜ್ಯ ಸರ್ಕಾರ ಮಂಡಿಸಿದ 2026-2027ನೇ ಸಾಲಿನ ಬಜೆಟ್‌ನಲ್ಲಿ ಅನಿವಾಸಿ ಕನ್ನಡಿಗರ (NRK) ಕಲ್ಯಾಣಕ್ಕಾಗಿ ಯಾವುದೇ ವಿಶೇಷ ಅನುದಾನ ಅಥವಾ ಯೋಜನೆ ಘೋಷಿಸದಿರುವುದಕ್ಕೆ ಪ್ರವಾಸಿ ಕೂಟ ವಿಟ್ಲ (ರಿ) ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವದಾದ್ಯಂತ ದುಡಿಯುತ್ತಿರುವ ಲಕ್ಷಾಂತರ ಕನ್ನಡಿಗರು ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಸ್ವತಃ NRI FORUM ನ ಅಧ್ಯಕ್ಷರೂ, ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬಜೆಟ್‌ನಲ್ಲಿ ಅನಿವಾಸಿಗರ ಸಮಸ್ಯೆಗಳು ಮತ್ತು ಕಲ್ಯಾಣಕ್ಕಾಗಿ ಯಾವುದೇ ಯೋಜನೆ ಕೈಗೊಳ್ಳದಿರುವುದು ತುಂಬಾ ನಿರಾಶೆ ತಂದಿದೆ ಎಂದು ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಮಸೂದ್ ವಿಟ್ಲ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!