November 22, 2024

ಮಂಗಳೂರು: ಕೊರಗಜ್ಜನ ಗುಡಿಯ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿದ ಪ್ರಕರಣ:
ಆರೋಪಿ ದೇವದಾಸ್ ದೇಸಾಯಿ ಬಂಧನ

0

ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇದೀಗ ಆತ ದೇವಸ್ಥಾನ, ಮಸೀದಿ ಸೇರಿದಂತೆ 18 ಕಡೆಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿದ್ದ ಎಂದು ತಿಳಿದು ಬಂದಿದೆ.

ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ ಎಂದು ಗುರುತಿಸಲಾಗಿದೆ.

ಓರ್ವ ವ್ಯಕ್ತಿ ಕೊರಗಜ್ಜನ ಗುಡಿಗೆ ಬಂದು ವಸ್ತುವೊಂದನ್ನು ಇಟ್ಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದರ ಆಧಾರದಲ್ಲಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ನಂದಿಗುಡ್ದೆಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದ ವಿಶ್ವಹಿಂದೂ ಪರಿಷತ್ ಬಜರಂಗದಳ ಪ್ರಮುಖರು ಆಗ್ರಹಿಸಿ, ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.

ಪೊಲೀಸರ ವಶದಲ್ಲಿರುವ ದೇವದಾಸ್ ಹುಬ್ಬಳ್ಳಿ ಮೂಲದವರಾಗಿದ್ದು, 1997 ನೇ ಇಸವಿಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಮಂಗಳೂರಿನ ಬಂದರಿನ ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಕಛೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದು, ಬಳಿಕ ಅನೇಕ ಕಡೆಗಳಲ್ಲಿ ಕೆಲಸ ಮಾಡಿ ಈಗ ಸರಿಯಾದ ಕೆಲಸವಿಲ್ಲದೆ ಗುಜಿರಿ ಪೇಪರ್ ಬಾಕ್ಸ್ ಗಳನ್ನು ಮಾರಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ.

ಇನ್ನು ಈ ಹಿಂದೆಯೂ ಕಾಪಿಕಾಡ್ ಬಳಿಯ ದಡ್ಡಲ್ ಕಾಡ್ ಕೋಟೆದ ಬಬ್ಬುಸ್ವಾಮಿ, ಅತ್ತಾವರದ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿ, ಕೊಟ್ಟಾರದ ಬಬ್ಬುಸ್ವಾಮಿ, ಉಳ್ಳಾಲದ ಕೊರಗಜ್ಜನ ಕಟ್ಟೆಯಯಲ್ಲಿ ಇದೇ ರೀತಿಯ ಕೃತ್ಯ ಕಂಡುಬಂದಿತ್ತು.
ಈ ಹಿಂದೆ ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರದ ದೈವಸ್ಥಾನಗಳ ಕಾಣಿಕೆ ಡಬ್ಬಿಗಳಿಗೆ ಆರೋಪಿಗಳು ಕಾಂಡೋಮ್‌ಗಳನ್ನು ಹಾಕಿ ಅಪವಿತ್ರಗೊಳಿಸಿದ್ದರು. ಈ ಪ್ರಕರಣದ ಪ್ರಮುಖ ರೂವಾರಿ ನವಾಝ್‌ ಸಾವನ್ನಪ್ಪಿದ್ದು. ಈ ಸಂದರ್ಭ ಕೃತ್ಯದಲ್ಲಿ ಭಾಗಿಯಾದ ಅಬ್ದುಲ್‌ ರಹೀಂ, ಅಬ್ದುಲ್‌ ತೌಫಿಕ್‌ ಭಯಭೀತಗೊಂಡು ದೈವಸ್ಥಾನದಲ್ಲಿ ಕ್ಷಮೆಯಾಚಿಸಿದ್ದರು.

Leave a Reply

Your email address will not be published. Required fields are marked *

error: Content is protected !!