April 24, 2026

ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಸಾವು

0
image_editor_output_image-1747511351-1773012198095.jpg

ತುಮಕೂರು: ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಒಬ್ಬರು ಸಾವನಪ್ಪಿದ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ.

ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿಯಾಗಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಪರಿವರ್ತಕ ಅಳವಡಿಸುವಾಗ ದುರಂತ ಸಂಭವಿಸಿದ್ದು, 26 ವರ್ಷದ ಕೆಪಿ ಮನು ಸಾವನ್ನಪ್ಪಿದ್ದಾರೆ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನ ಕೆಲಸಕ್ಕೆ ನಿಯೋಜಿಸಿದ್ದರು ಎಂಬ ಆರೋಪವಿದೆ.

Leave a Reply

Your email address will not be published. Required fields are marked *

You may have missed

error: Content is protected !!