April 24, 2026

ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

0
image_editor_output_image208378900-1773099773761.jpg

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಟ್ಟೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ(25) ಸಾವನ್ನಪ್ಪಿದ್ದಾರೆ.

ಮೃತ ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!