5 ಲಕ್ಷ ಲಂಚ ಪಡೆಯುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕನಿಗೆ ಜಾಮೀನು
ಬೆಂಗಳೂರು: 5 ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಾಸಕ ಚಂದ್ರು ಲಮಾಣಿ ಕಳೆದ 15 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಈ ಮಧ್ಯೆ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಒದಗಿಸುವ ಷರತ್ತಿನೊಂದಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ. ಇದನ್ನೂ




