ಕಡಬ: ಜಾನುವಾರುಗಳನ್ನು ಓಡಿಸುವಾಗ ಬಿದ್ದು ಮಹಿಳೆ ಮೃತ್ಯು
ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಮೃತಪಟ್ಟವರು ಕೊಣಾಲು ಗ್ರಾಮದ ಪಾತೃಮಾಡಿ ನಿವಾಸಿ 64 ವರ್ಷದ ಲೀಲಾವತಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಮಾರ್ಚ್ 11ರಂದು ಸಂಜೆ ತಮ್ಮ ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಲೀಲಾವತಿ ಶೆಟ್ಟಿ ಹೊರಟಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ನೆಲಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಲೀಲಾವತಿ ಅವರ ಪುತ್ರ ಹರೀಶ್ ಲಾರಿ ಚಾಲಕರಾಗಿದ್ದು, ಆ ದಿನ ರಾತ್ರಿ ಮನೆಗೆ ಬಂದಾಗ ಮನೆ ಬಾಗಿಲು ತೆರೆದಿರುವುದು ಕಂಡುಬಂದಿದೆ. ಆದರೆ ತಾಯಿ ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಆತಂಕಗೊಂಡ ಅವರು ನೆರೆಮನೆಯವರ ಸಹಾಯದಿಂದ ಹುಡುಕಾಟ ಆರಂಭಿಸಿದ್ದಾರೆ.




