ಸುಳ್ಯ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಸುಳ್ಯ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಬೆಳ್ತಂಗಡಿಯ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಗಿದ್ದು, . ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯವು ಆತನಿಗೆ ಐಪಿಸಿ ಸೆಕ್ಷನ್ 457 ರ ಅಡಿಯಲ್ಲಿ ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 500 ರೂ. ದಂಡ , ಐಪಿಸಿ ಸೆಕ್ಷನ್ 380 ರ ಅಡಿಯಲ್ಲಿ, ಆತನಿಗೆ 10 ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 500 ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ 10 ದಿನಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.
ಇದಲ್ಲದೆ, ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನಲೆ ಶರತ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 269 ರ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು 1,000 ರೂ. ದಂಡ ಅಥವಾ 10 ದಿನಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಎಸ್‌ಐ ಸಂತೋಷ್ ಬಿಪಿ ತನಿಖಾಧಿಕಾರಿಯಾಗಿ ಸೇವೆ ಸಲ್ಲಿಸಿ, ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೊದಲು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂಸಿ ಪ್ರಕರಣದ ವಾದ ಮಂಡಿಸಿದರು.




