ಓಮಿಕ್ರಾನ್ ಹೆಚ್ಚಳ ಹಿನ್ನೆಲೆ:
ಪ್ರಧಾನಿ ನರೇಂದ್ರ ಮೋದಿ ಯುಎಇ ಪ್ರವಾಸ ಮುಂದೂಡಿಕೆ
ನವದೆಹಲಿ: ದೇಶದಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ.
ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್ ಗೆ ತೆರಳಬೇಕಿತ್ತು. ಆದರೆ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿಕೆಯಾಗಿದ್ದು, ಫೆಬ್ರವರಿಯಲ್ಲಿ ಮರುದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ ಎಂದು ಸುದ್ದಿ ಸಂಸ್ಧೆ ಪಿಟಿಐ ಟ್ವೀಟ್ ಮಾಡಿದೆ.
ಓಮಿಕ್ರಾನ್ ರೂಪಾಂತರ ಜಗತ್ತಿನಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಇನ್ನು ಅಮೆರಿಕಾದಲ್ಲಿ ಡೆಲ್ಟಾಗಿಂತ ಓಮಿಕ್ರಾನ್ ಪ್ರಬಲ ವೈರಸ್ ಆಗಿ ಬದಲಾಗಿದೆ.
ಭಾರತದಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇನ್ನು ಯುಎಇಯಲ್ಲಿ ಸೋಮವಾರ 1,732 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.