March 16, 2026

ಉಡುಪಿ: ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

0
image_editor_output_image-1575743104-1773647156215.jpg

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು

Leave a Reply

Your email address will not be published. Required fields are marked *

error: Content is protected !!