May 5, 2026

ಗಡಿಪಾರು ವಿಚಾರ: ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್

0
image_editor_output_image-201007519-1773789573507.jpg

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಕ್ರಮ ಮರುಪರಿಶೀಲಿಸಿ ಹೊಸದಾಗಿ ಆದೇಶಿಸಲು ಪುತ್ತೂರು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2026ರ ಜನವರಿ 31ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ಪೀಠದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಇಲ್ಲವೆಂದು ತಿಳಿಸಿ ಮೇಲ್ಮನವಿ ವಜಾಗೊಳಿಸಿತು.

Leave a Reply

Your email address will not be published. Required fields are marked *

error: Content is protected !!