March 19, 2026

ಕೊಣಾಜೆ: 9 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

0
image_editor_output_image-1840605704-1773877756737.jpg

ಮಂಗಳೂರು: ಒಂಬತ್ತು ವರ್ಷದ ಬಾಲಕನಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಎಂಬಾತನನ್ನು ಕೊಣಾಜೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಆರೋಪಿಯು ಬಾಲಕನಿಗೆ ಹಣ ಮತ್ತು ತಿಂಡಿ ನೀಡುವ ಆಮಿಷವೊಡ್ಡಿ ತನ್ನೊಂದಿಗೆ ಕರೆದೊಯ್ದು ಈ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಬಾಲಕನಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಅಸಭ್ಯವಾಗಿ ಕ್ರಿಯೆಗಳಿಗೆ ಪ್ರಚೋದನೆ ನೀಡಿದ್ದೂ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತ ಬಾಲಕನ ಪೋಷಕರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಿಜೈನಲ್ಲಿರುವ ಖಾಸಗಿ ಲಾಜಿಸ್ಟಿಕ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!